Monday, June 23, 2025
26.6 C
Bengaluru
Google search engine
LIVE
ಮನೆರಾಜ್ಯಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಫಸ್ಟ್​..!

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಫಸ್ಟ್​..!

ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ

600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ.ನಿರ್ಮಲಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ನಿರ್ಮಲಾ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ನಿರ್ಮಲಾ 600ಕ್ಕೆ 596 ಅಂಕ ಪಡೆದಿದ್ದಾರೆ.‌

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments