ಬೆಂಗಳೂರು ನಿರ್ದೇಶಕ ನಾಗಶೇಖರ್ ಸಾರಥ್ಯದ ‘ಸಂಜು ವೆಡ್ಸ್ ಗೀತಾ-2’ (Sanju Weds Geeta 2) ಪ್ರಾರಂಭದಿಂದಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.  ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು  ನಾಗಶೇಖರ್  ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ  ರಮ್ಯಾ ಬದಲು ರಚಿತಾರಾಮ್ ಎಂಟ್ರಿಯಾಗಿದ್ದಾರೆ. ಈ ಚಿತ್ರದ ಪ್ರೀ ಕ್ಲೈಮ್ಯಾಕ್ಸ್  (Pre Climax) ದೃಶ್ಯದ ಚಿತ್ರೀಕರಣ ನಿನ್ನೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿತ್ತು. ಅಲ್ಲಿ ನಾಯಕ ಶ್ರೀನಗರ ಕಿಟ್ಟಿ ಒಬ್ಬ ಸೈನಿಕನ ಗೆಟಪ್ ನಲ್ಲಿದ್ದರು. ಜರ್ಮನ್ ಸೈನಿಕರ ವಿರುದ್ದ ಸೆಣೆಸಾಟ ನಡೆಸಿ  ಅವರ  ಹಿಡಿತದಿಂದ  ರಾಣಿಯನ್ನು ಬಿಡಿಸಿಕೊಂಡು ಬರುವ ಸನ್ನಿವೇಶವದು. ಆ ದೃಶ್ಯವನ್ನು ಗ್ರೀನ್ ಮ್ಯಾಟ್ ನಲ್ಲಿ ಚಿತ್ರೀಕರಿಸಲಾಗುತ್ತಿತ್ತು.

 

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

By admin

Leave a Reply

Your email address will not be published. Required fields are marked *

Verified by MonsterInsights