ಜಿಲ್ಲೆ

ಸತೀಶ್ ಜಾರಕಿಹೊಳಿಗೆ ಸಿಎಂ ಕುರ್ಚಿ ಮೇಲೆ ಕಣ್ಣು; ಮಾಜಿ ಸಚಿವ ರಾಜುಗೌಡ

ಯಾದಗಿರಿ: ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ  ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ಕುರಿತು ಮಾಜಿ ಸಚಿವ ರಾಜೂಗೌಡ ಪ್ರತಿಕ್ರಿಯಿಸಿದ್ದಾರೆ.

ಯಾದಗಿರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,  ಸತೀಶ್ ಜಾರಕಿಹೊಳಿ ಅವರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಇಳಿದರೆ, ನೂರಕ್ಕೆ ನೂರರಷ್ಟು ಸತೀಶ್ ಜಾರಕಿಹೊಳಿ ಸಿಎಂ ಆಗೋದು ಫಿಕ್ಸ್ ಎಂದರು.

ಸತೀಶ್ ಜಾರಕಿಹೊಳಿ ಅವರು ಸುಮ್ಮನೆ ಯಾರನ್ನು ಭೇಟಿ ಆಗಲ್ಲ, ಏನೋ ಪ್ಲ್ಯಾನ್ ಇಟ್ಕೊಂಡೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದಾರೆ. ಅದು ಸಕ್ಸಸ್​ ಆದ್ಮೇಲೆನೆ ಅವರು ಹೇಳೋದು ಎಂದು ಮಾಜಿ ಸಚಿವ ರಾಜೂಗೌಡ ಹೇಳಿಕೆ ನೀಡಿದರು.

Comments (0)

Your email address will not be published. Required fields are marked *

Back to top button