ಬೆಂಗಳೂರು : ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ . ಬಾಬಾ ಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ ಎಂದು ಬಿಜೆಪಿ ನಾಯಕರ ವಿರುದ್ದ ಗುಡುಗಿದ ಸಿಎಂ ಸಿದ್ದರಾಮಯ್ಯ.
ರಾಜಕೀಯ ಎಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ.
ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ನಾವು ಏರಿಕೆ ಮಾಡಿರುವ ಹಾಲಿನ ದರ 4 ರೂ ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಮೋದಿಯವರೇ? ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ …