udupiಜಿಲ್ಲೆ

ಮಣಿಪಾಲ್‌ನಲ್ಲಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ಓರ್ವ ವಿದ್ಯಾರ್ಥಿ ಗಂಭೀರ!

School bus falls into ditch in Manipal - one student in serious condition!

ಮಣಿಪಾಲ್ : ಮಣಿಪಾಲ್ ಸಮೀಪದ ಕೊಡಂಗೆಯಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್, ಎಂದಿನಂತೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕೊಡಂಗೆಯ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಿದ್ದ ಕಂದಕಕ್ಕೆ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ ಏಳು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಓರ್ವ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಟವಶಾತ್, ಬಸ್ ಅಪಘಾತ ಸಂಭವಿಸಿದ ಸಮಯಕ್ಕೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಕೆಲವು ಮಕ್ಕಳು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯನ್ನು ಕಂಡ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮಣಿಪಾಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button