ಬೆಳಗಾವಿ: ಕುಂದಾ ನಗರಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲಿಡಲಾಗಿದೆ. ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಸಿಎಂಗಳಿಗೆ ಆಸನ ಮೀಸಲಿಟ್ಟು ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಾಜಿ ಸಿಎಂಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಹೆಸರಲ್ಲಿ ಅಧಿಕಾರಿಗಳು ಆಸನಗಳನ್ನು ಮೀಸಲು ಇಟ್ಟಿದ್ದಾರೆ. ಬೆಳಗಾವಿ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯದಿಂದ ಈ ಯಡವಟ್ಟು ನಡೆದಿದೆ.
ಇಂದು ಮೂವರು ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದಿರುವ ಮೂವರು ಶಾಸಕರು ಅಧಿವೇಶನದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಯಾಸೀರ್ ಖಾನ್ ಪಠಾಣ್, ಸಂಡೂರು ಮತಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಏನಿದು ಬೆಳಗಾವಿ ಜಿಲ್ಲಾಡಳಿತದ ಯಡವಟ್ಟು..?
ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರ ಹೆಸರನ್ನು ತೆಗೆದು ಉಪ ಚುನಾವಣೆಯಲ್ಲಿ ಗೆದ್ದಿರುವ ಯಾಸೀರ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಂ ಮತ್ತು ಸಿ.ಪಿ.ಯೋಗೇಶ್ವರ್ ಹೆಸರನ್ನು ಬೆಳಗಾವಿ ಜಿಲ್ಲಾಡಳಿತ ಸೇರ್ಪಡೆ ಮಾಡಬೇಕಿತ್ತು. ಆದರೆ ಮಾಜಿ ಶಾಸಕರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಹೆಸರಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಆಸನಗಳನ್ನು ಮೀಸಲು ಇಟ್ಟಿದ್ದಾರೆ ಎಂದು ವರದಿಯಾಗಿದೆ.