Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

ಬೆಂಗಳೂರು: ಕಾಂಗ್ರೆಸ್​​​​ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್​​.ವೈ ಮೇಟಿ ತೀವ್ರ ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ..

ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಹೆಚ್‌.ವೈ ಮೇಟಿ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಇನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H​.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.

2008ರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮೇಟಿ, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್​.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಫರ್ಧಿಸಿ ಗೆಲುವಿನ ನಗೆ ಬೀರಿದ್ದರು.

ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments