Top Newsಸುದ್ದಿ

ಮಾದಾವರ ಮೆಟ್ರೋ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸರಣಿ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮಾದಾವರ ಮೆಟ್ರೋ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

ಮೂಡಿಗೆರೆ-ಹಾಸನ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು ಅತಿವೇಗ ಮತ್ತು ಅಜಾಗರೂಕತೆಯಿಂದಾಗಿ ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಹಿಂದಿನಿಂದ ಬರುತ್ತಿದ್ದ ಕಾರುಗಳು ಸಹ ಬಸ್‌ಗೆ ಗುದ್ದಿವೆ. ಈ ಸರಣಿ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿಯ ರೆಡ್ ಬಸ್ ಮತ್ತು ಪವರ್ ಪ್ಲಸ್ ಬಸ್‌ಗಳಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಗಾಯಾಳುಗಳನ್ನು ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ, ಹೊಸಕೋಟೆ ಹಾಗೂ ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯ ಮಲ್ಲಮ್ಮಕ್ಕನಪುರ ಗೇಟ್ ಬಳಿ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಆಂಧ್ರ ಮೂಲದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಜ್ಜುಗುಜ್ಜಾಗಿದ್ದು, ಹೊಸಕೋಟೆ ಪೊಲೀಸರು ಮೃತನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Comments (0)

Your email address will not be published. Required fields are marked *

Back to top button