Top Newsದೇಶ/ವಿದೇಶ

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ

ಉತ್ತರಾಖಂಡ್​: ಉತ್ತರಕಾಶಿ ಜಿಲ್ಲೆಯಲ್ಲಿ ಭೀಕರ ಮೇಘಸ್ಫೋಟ ಸಂಬಂಧಿಸಿದ್ದು, ಹಠಾತ್​ ಪ್ರವಾಹದಿಂದ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ.

ಖೀರ್​ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ಬಗ್ಗೆ ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ಪ್ರತಿಕ್ರಿಯೆ ನೀಡಿದ್ದು, ಧರಾಲಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಪ್ರವಾಹದಲ್ಲಿ ಅನೇಕ ಮನೆಗಳು ಸರ್ವನಾಶವಾಗಿದ್ದು, ವಾಹನಗಳು ಹಾಗೂ ಅಂಗಡಿಗಳು ಸಹ ಧ್ವಂಸವಾಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎದೆ ಝಲ್ ಎನ್ನಿಸುವಂತಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ.

ಸದ್ಯ ಉತ್ತರಾಖಂಡ್​ ಸಿಎಂ ಪುಷ್ಕರ್​ ಸಿಂಗ್​ ಧಾಮಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನು ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ವ್ಯಾಪಕ ಹಾನಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button