ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು, ಕೋರ್ಟ್ ಆದೇಶದಂತೆ ಮುನಿರತ್ನರನ್ನ ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹೌದು….ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಆತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಮಾತ್ರವಲ್ಲದೇ ಸರ್ಕಾರಿ ಕಾರಿನಲ್ಲೂ ಸಹ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಟಿವಿ9ಗೆ ಸಂತ್ರಸ್ತ ಮಹಿಳೆಯ ಎಕ್ಸೂಸ್ಲಿವ್ ಹೇಳಿಕೆ ಲಭ್ಯವಾಗಿದ್ದು, ಈ ಆರೋಪ ಮುನಿರತ್ನಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ.
ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದಾರೆ. ಕೋರ್ಟ್ ಆದೇಶದಂತೆ ಮುನಿರತ್ನರನ್ನ ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮೊನ್ನೆ(ಸೆ.24ರ ರಾತ್ರಿಯೇ ಪರಪ್ಪನ ಅಗ್ರಹಾರ ಜೈಲಿನಿಂದ CID ಕಚೇರಿಗೆ ಬಂದಿರೋ ಮುನಿರತ್ನ ನಿನ್ನೆ ಇಂದು ದಿನಪೂರ್ತಿ ತನಿಖಾಧಿಕಾರಿಗಳ ವಿಚಾರಣೆಗೆ ಥಂಡಾ ಹೊಡೆದಿದ್ದಾರೆ.