Top Newsರಾಜಕೀಯರಾಜ್ಯಸುದ್ದಿ

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ

ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ನದಿ ದಡಗಳಲ್ಲಿ‌ ಸೋಪು, ಶಾಂಪು‌ ಮಾರಾಟ ಹಾಗೂ ಬಳಕೆ ಮಾಡದಂತೆ ಆದೇಶಿಸಲಾಗಿದೆ.

ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜನೆ ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಈ ಆದೇಶ ಹೊರಡಿಸಿದ್ದಾರೆ.

Comments (0)

Your email address will not be published. Required fields are marked *

Back to top button