ಜಿಲ್ಲೆ
ಶೇರ್ ಮಾರ್ಕೆಟ್ನಲ್ಲಿ ಲಾಸ್ – ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ!
A young man committed suicide by shooting himself in the share market.

ಮಡಿಕೇರಿ : ಶೇರ್ ಮಾರ್ಕೆಟ್ನಲ್ಲಿ ಲಕ್ಷ ಲಕ್ಷ ಲಾಸ್ ಆಗಿದ್ದಕ್ಕೆ ಬಂದೂಕಿನಿಂದ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಡಗು ಜಿಲ್ಲೆಯ ಕುಂಬಳದಾಳು ಗ್ರಾಮದಲ್ಲಿ ಘಟನೆ ನಡೆದಿದೆ.
ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೇಲ್ನೋಟಕ್ಕೆ ಕವನ್ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.




