Thursday, May 1, 2025
30.3 C
Bengaluru
LIVE
ಮನೆ#Exclusive NewsTop Newsಶಿಗ್ಗಾಂವಿ ಉಪಚುನಾವಣೆ: ಯಾಸೀರ್ ಅಹಮದ್‌ ಖಾನ್‌ ಪಠಾಣ್‌ ಕಾಂಗ್ರೆಸ್‌ ಟಿಕೆಟ್‌

ಶಿಗ್ಗಾಂವಿ ಉಪಚುನಾವಣೆ: ಯಾಸೀರ್ ಅಹಮದ್‌ ಖಾನ್‌ ಪಠಾಣ್‌ ಕಾಂಗ್ರೆಸ್‌ ಟಿಕೆಟ್‌

ಹಾವೇರಿ: ಶಿಗ್ಗಾಂವಿ ಉಪಚುನಾವಣಾ ಕಣ ರಂಗೇರಿದ್ದು, ಭಾರೀ ಪೈಪೋಟಿಯ ನಡುವೆ ಕೊನೆಗೂ ಕಾಂಗ್ರೆಸ್‌ ಟಿಕೆಟ್‌ ಅಲ್ಪಸಂಖ್ಯಾತರ ಪಾಲಾಗಿದೆ. ಯಾಸೀರ್ ಅಹಮದ್‌ ಖಾನ್‌ ಪಠಾಣ್‌ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್​ಗಾಗಿ ಕಾಂಗ್ರೆಸ್​​ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್​ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್​ ನೀಡಬೇಕೆಂಬ ಕೂಗು ಕೇಳಿಬಂದಿದ್ದವು.

ಅಲ್ಪಸಂಖ್ಯಾ ಸಮುದಾಯದಿಂದ ಅಜ್ಜಂಫೀರ್ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರ ಅವರು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು. ಆದ್ರೆ, ಅಂತಿಮವಾಗಿ ಹೈಕಮಾಂಡ್​ ಮತ್ತೆ ಯಾಸೀರ್ ಖಾನ್ ಪಠಾಣ್ ಅವರಿಗೆ ಮಣೆ ಹಾಕಿದೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗಿದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಉಪಚುನಾವಣೆಗೆ ಬಿಜೆಪಿಯಿಂದ ಬೊಮ್ಮಾಯಿ ಅವರ ಪುತ್ರ ಭರತ್​ ಕಣಕ್ಕಿಳಿದಿದ್ದಾರೆ. ಹೀಗಾಗಿ ಕಾಂಗ್ರೆಸ್​ನ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ತಂದೆಯನ್ನು ಎದುರಿಸಿದ್ದರೆ ಈ ಉಪಚುನಾವಣೆಯಲ್ಲಿ ಪುತ್ರನನ್ನು ಎದುರಿಸಲಿದ್ದಾರೆ. ಆದ್ರೆ, ಫಲಿತಾಂಶ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments