Tuesday, January 27, 2026
26.9 C
Bengaluru
Google search engine
LIVE
ಮನೆಮನರಂಜನೆಅಭಿಮಾನಿಗಳಿಗೆ ಶಿವಣ್ಣ ಸ್ಪೆಷಲ್ ಗಿಫ್ಟ್

ಅಭಿಮಾನಿಗಳಿಗೆ ಶಿವಣ್ಣ ಸ್ಪೆಷಲ್ ಗಿಫ್ಟ್

ಬೆಂಗಳೂರು: ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್‌ಗೆ ಜು.12ರಂದು ಹುಟ್ಟುಹಬ್ಬದ ಸಂಭ್ರಮ. ಇದೀಗ ತಾವು ನಟಿಸಿರುವ ’45’ ಚಿತ್ರದ ಬಗ್ಗೆ ಶಿವರಾಜಕುಮಾರ್ ಅಪ್‌ಡೇಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಫ್ಯಾನ್ಸ್‌ಗೆ ಶಿವಣ್ಣ ಸ್ಪೆಷಲ್ ಗಿಫ್ಟ್‌ವೊಂದನ್ನು ನೀಡಲಿದ್ದಾರೆ.

ಹುಟ್ಟುಹಬ್ಬ ಎನ್ನುವುದು ತಂದೆ ತಾಯಿ ನಮಗೆ ನೀಡಿರುವ ಗಿಫ್ಟ್. ಅವರಿಗೆ ನಾವು ಯಾವಾಗಲೂ ಚಿರ ಋಣಿಯಾಗಿರಬೇಕು. ಇದೇ ಜುಲೈ 12, ನನ್ನ 62ನೇ ಹುಟ್ಟುಹಬ್ಬ. ಇಷ್ಟು ವರ್ಷಗಳಿಂದ ಸಾವಿರಾರು ಅಭಿಮಾನಿಗಳು ನಮ್ಮ ಮನೆಗೆ ಬಂದು ನನ್ನ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದೀರಿ. ನಿಮ್ಮ ಅಭಿಮಾನಕ್ಕೆ ನನ್ನ ಧನ್ಯವಾದ. ಈ ಸಲದ ಹುಟ್ಟುಹಬ್ಬಕ್ಕೆ ನಾನು ನಿಮಗೊಂದು ಸ್ಪೆಷಲ್ ಗಿಫ್ಟ್ ಕೊಡಲಿದ್ದೇನೆ. ಅದೇನೆಂದರೆ, ನನ್ನ ಹುಟ್ಟುಹಬ್ಬದ ದಿನ ಬಹುನಿರೀಕ್ಷಿತ ’45’ (45 Film) ಚಿತ್ರದ ನನ್ನ ಫಸ್ಟ್ ಲುಕ್ ರಿಲೀಸ್ ಆಗಲಿದೆ. ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ, ಅರ್ಜುನ್ ಜನ್ಯ ಮೊದಲ ನಿರ್ದೇಶನದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ನಾನು, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿದ್ದೇವೆ. ಈ ಚಿತ್ರ ಇಂಡಿಯನ್ ಸ್ಕ್ರೀನ್‌ನಲ್ಲೇ ಉತ್ತಮ ಚಿತ್ರವಾಗಲಿದೆ ಎಂದು ನನ್ನ ನಂಬಿಕೆ. ಅದಕ್ಕೆ ದೇವರ ಆಶೀರ್ವಾದ ಬೇಕು. ಆ ದೇವರು ಎಂದರೆ ಅಪ್ಪಾಜಿ ಹೇಳಿದ ಹಾಗೆ ಅಭಿಮಾನಿಗಳು. ಅಭಿಮಾನಿ ದೇವರುಗಳು ಈ ಚಿತ್ರವನ್ನು ನೋಡಿ ಹಾರೈಸಿ ಎಂದಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ ’45’. ಈ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿರುವ ಶಿವರಾಜಕುಮಾರ್‌ಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ’45’ ಚಿತ್ರತಂಡ ಶಿವರಾಜಕುಮಾರ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಕನ್ನಡ ಚಿತ್ರರಂಗದ ಮೂವರು ಹೆಸರಾಂತ ನಾಯಕನಟರ ಸಮಾಗಮದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ.

ಬಹುನಿರೀಕ್ಷಿತ ಈ ಚಿತ್ರಕ್ಕೆ ಸದ್ಯದಲ್ಲೇ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶ ಮೂವತ್ತು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಇಷ್ಟು ದಿನಗಳ ಕಾಲ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿರುವುದು ಕನ್ನಡದಲ್ಲಿ ಇದೇ ಮೊದಲಿರಬಹುದು. ಸೆಪ್ಟೆಂಬರ್‌ನಲ್ಲಿ ’45’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಲಿದೆ. ಇನ್ನು ಈ ಚಿತ್ರದ ನಿರ್ದೇಶಕ ಅರ್ಜುನ್ ಜನ್ಯ ಅವರು ಜನಪ್ರಿಯ ಸಂಗೀತ ನಿರ್ದೇಶಕರೇ ಆಗಿರುವುದರಿಂದ ಚಿತ್ರದ ಹಾಡುಗಳ ಬಗ್ಗೆ ಕೂಡ ಸಾಕಷ್ಟು ನಿರೀಕ್ಷೆಯಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments