Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ‘ಸಂಜು ವೆಡ್ಸ್ ಗೀತಾ 2’

ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ‘ಸಂಜು ವೆಡ್ಸ್ ಗೀತಾ 2’

ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮಾಡಲಾಯಿತು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ಹೇಳಲು ಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ  ರಮ್ಯಾ ಬದಲು ನಾಯಕಿಯಾಗಿ  ರಚಿತಾರಾಮ್ ಎಂಟ್ರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಾಗಶೇಖರ್, ನಮ್ಮ ಚಿತ್ರ ವರ್ಷದ ಹಿಂದೆ ಶುರುವಾಗಿತ್ತು. ಶಿಡ್ಲಘಟ್ಟ,  ಸ್ವಿಟ್ಜರ್ ಲ್ಯಾಂಡ್, ಬೆಂಗಳೂರು ಸುತ್ತಮುತ್ತ ಓಟ್ಟು 72 ದಿನಗಳ ಕಾಲ ಆರು ಹಂತಗಳಲ್ಲಿ ಯಶಸ್ವಿಯಾಗಿ  ಶೂಟಿಂಗ್ ನಡೆಸಲಾಯಿತು, ನಿರ್ಮಾಪಕ ಕುಮಾರ್ ಅವರ ಸಹಕಾರದಿಂದ ಇದು ಸಾಧ್ಯವಾಯಿತು. ಕಿಟ್ಟಪ್ಪ, ರಚಿತಾರಾಮ್, ಸಾಧು ಕೋಕಿಲ, ತಬಲಾನಾಣಿ ಸೇರಿದಂತೆ ಬಿಗ್ ಸ್ಟಾರ್ ಕಾಸ್ಟ್ ಚಿತ್ರದಲ್ಲಿದೆ. ಈಗಾಗಲೇ ಎಡಿಟಿಂಗ್, ಡಬ್ಬಿಂಗ್ ಕೂಡ ನಡೆದಿದೆ.  ಸದ್ಯದಲ್ಲೇ  ಆಡಿಯೋ ರಿಲೀಸ್ ಮಾಡೋ ಪ್ಲಾನಿದೆ. ಇವತ್ತಿನ ಟೆಕ್ನಾಲಜಿಯ ಲವ್ ಸ್ಟೋರಿ,  ಜೊತೆಗೆ ಒಂದು ಸರ್ ಪ್ರೈಸ್ ಚಿತ್ರದಲ್ಲಿದೆ. ಇದರಲ್ಲೂ ನಾಯಕ ಬ್ಯೂಟಿ, ಐ ಲವ್ ಯೂ ಗೀತಾ ಅಂತಲೇ ಹೇಳ್ತಾನೆ ಎಂದರು.

ಸಾಧು ಕೋಕಿಲ, ತಬಲಾನಾಣಿ, ಮೂಗು ಸುರೇಶ್ ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಚಿತ್ರದ ಕುರಿತಂತೆ ಮಾತನಾಡಿದರು. ಸಂಗೀತ ನಿರ್ದೇಶಕ‌  ಶ್ರೀಧರ ವಿ. ಸಂಭ್ರಮ್ ಚಿತ್ರದಲ್ಲಿ ಐದು ಸುಂದರ ಹಾಡುಗಳನ್ನು  ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ.  ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ  ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ರಿಲೀಸ್  ಮಾಡುತ್ತಿದೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments