ಹುಬ್ಬಳ್ಳಿ : ಕಳೆದ ಆರು ತಿಂಗಳಿಂದ ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು ಆರೋಪಿಸಿ, ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಶ್ರೀರಾಮ ಸೇನೆಯ ಮುಖಂಡ ಗಂಗಾಧರ ಕುಲಕರ್ಣಿ ನೇತೃತ್ವದಲ್ಲಿ, ಪ್ರತಿಭಟಿನೆ ಮಾಡಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಪರ ಸಂಘಟನೆಗಳ ಮುಖಂಡರು ಸೇರಿದಂತೆ, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಲಾಗುತ್ತಿದೆ. ಇತ್ತಿಚೆಗೆ ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ 35 ಟನ್ ಗೋಮಾಂಸ ಸಾಗಟ ಮಡುತ್ತಿದ್ದನ್ನು ಹಿಡಿದ ಮುಖಡರ ಮೇಲೆ ಪ್ರಕರಣ ದಾಖಲಿಸಿ, 48 ದಿನ ಜೈಲುವಾಸ ಮಾಡಿಸಲಾಗಿದೆ. ಅಲ್ಲದೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ ಅವರಿಗೆ ಚಿಕ್ಕಮಗಳೂರು ಸೇರಿ ಶಿವಮೊಗ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂದ ಹೇರಲಾಗಿದೆ. ಜೊತೆಗೆ ಹುಬ್ಬಳ್ಳಿಯಲ್ಲಿ ಕೇಸದ ಕೂಡಾ ಹಾಕಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವಂತೆ ನಿರ್ದೇಶನ ನೀಡಬೇಕು ಎಂದು ಅಗ್ರಹಿಸಿದರು.