ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಪ್ರಗತಿ ಪರ ಸಂಘಟನೆಗಳಿಗೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸಾಥ್ ನೀಡಿದವು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾ ಮುಖಂಡರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ವಿಶ್ವವಿದ್ಯಾಲಯ ಉಳಿಸಿ,
ಯಾವುದೇ ಕಾರಣಕ್ಕೂ ಹೊಸ ವಿಶ್ವವಿದ್ಯಾಲಯಗಳನ್ನು ರದ್ದು ಮಾಡಬಾರದೆಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.


