#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯವಿಶೇಷವೆಬ್ ಸ್ಟೋರೀಸ್ವೈರಲ್ ನ್ಯೂಸ್ಸುದ್ದಿ
ಸಿದ್ದರಾಮಯ್ಯನವರು ರಾಜಿನಾಮೆ ನೀಡೊದಿಲ್ಲ:ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.ಸಿದ್ರಾ




