Top Newsರಾಜಕೀಯರಾಜ್ಯ

ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್: ಎಕ್ಸ್​​​ನಲ್ಲಿ ಜೆಡಿಎಸ್ ಆಕ್ರೋಶ

ಬೆಂಗಳೂರು: ರಾಜಧಾನಿಯ ಕೆ.ಆರ್ ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಆಕ್ರೊಶ ವ್ಯಕ್ತಪಡಿಸಿದೆ.

ಸಿದ್ದರಾಮಯ್ಯ ವಿರುದ್ದ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್, ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಟ್ಯಾಗ್ ಮಾಡಿ ವಾಗ್ದಾಳಿ ನಡೆಸಿದೆ. ಅಷ್ಟೇ ಅಲ್ಲದೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನಾಲಾಯಕ್ ಎಂದು ಲೇವಡಿ ಮಾಡಿದ್ದಾರೆ.

ಜೆಡಿಎಸ್ ಟ್ವೀಟ್ ಏನು?
ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರುವುನ ಕಾಯಿಲೆಯೇ? ಬೆಂಗಳೂರಿನ ಕೆ.ಆರ್.ಮಾರ್ಕೆಟ್‌ನಲ್ಲಿ ನಡೆದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರನ್ನ ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ಎಂದು ಸಮರ್ಥಿಸಿಕೊಳ್ಳುವ ನೀವು ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ ಸಿದ್ದರಾಮಯ್ಯ. ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕೊಲೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುವುದು ರಾಜ್ಯದಲ್ಲಿ ಕುಸಿದುಬಿದ್ದಿರುವುದು ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದೆ. 

Comments (0)

Your email address will not be published. Required fields are marked *

Back to top button