Wednesday, April 30, 2025
24 C
Bengaluru
LIVE
ಮನೆ#Exclusive NewsTop Newsಇನ್ನೆರಡು ತಿಂಗಳಲ್ಲಿ KAS​​ ಪರೀಕ್ಷೆ ಮರು ನಡೆಸಿ: KPSCಗೆ ಸಿದ್ದರಾಮಯ್ಯ ಆದೇಶ

ಇನ್ನೆರಡು ತಿಂಗಳಲ್ಲಿ KAS​​ ಪರೀಕ್ಷೆ ಮರು ನಡೆಸಿ: KPSCಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಂತ್ರಿ, ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಎಸ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಆಗಸ್ಟ್​ 27 ರಂದು ಕೆಪಿಎಸ್​ಸಿ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರ್ಸ್​ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಕಂಡು ಬಂದಿದ್ದವು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಪಿಎಸ್​​ಸಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಕೆಪಿಎಸ್​ಸಿಯಲ್ಲಿ ಬದಲಾವಣೆ ಬೇಕು, ಕೆಪಿಎಸ್​ಸಿ ಮರು ಪರೀಕ್ಷೆ ನಡೆಸಬೇಕು ಎಂಬ ಕೂಗು ಜೋರಾಯ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೆಪಿಎಸ್​ಇಯಿಂದ ವರದಿಯನ್ನು ಕೇಳಿದೆ. ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರಷೋತ್ತಮ ಬಿಳಿಮಲೆ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಉದ್ಯೋಗ ಸಿಗುವುದು ಬಹಳ ಕಷ್ಟ ಇದೆ. ಈ ಮಧ್ಯೆ ಕೆಪಿಎಸ್​ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಪ್ಪು ಮತ್ತಷ್ಟು ನೋವು ತಂದಿದೆ. ನಾವು ಈಗಾಗಲೇ ಕೆಪಿಎಸ್​ಸಿಗೆ ಪತ್ರ ಬರೆದಿದ್ದು, ಉತ್ತರವೂ ಬಂದಿದೆ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments