ಬೆಂಗಳೂರು: ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ಭಾಗಗಳಾದ ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳು ತತ್ತರಿಸಿ ಹೋಗಿವೆ.. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.
ನಾಲ್ಕು ಜಿಲ್ಲೆಗಳ ಹನ್ನೊಂದು ಪಾಯಿಂಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ನವರು ಸಮೀಕ್ಷೆ ನಡೆಸಿದ್ದು, ಸಿಎಂ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಎಂ.ಬಿ ಪಾಟೀಲ್, ಶರಣಪ್ರಕಾಶ್ ಪಾಟೀಲ್ ಭಾಗಿಯಾಗಿದ್ದರು.
ಸಮೀಕ್ಷೆ ಬಳಿಕ ಸಂಜೆ 4:30ಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ಪರಿಹಾರ ವಿತರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಇನ್ನು ಸಿಎಂ ವೈಮಾನಿಕ ಸಮೀಕ್ಷೆಗೆ ಬಿಜೆಪಿ ವ್ಯಂಗ್ಯವಾಡಿದ್ದು, ವಿಪಕ್ಷ ನಾಯಕ ಆರ್. ಅಶೋಕ್, ನೀವು ಜನ ಘೇರಾವ್ ಆಗುತ್ತಾರೆಂಬ ಭೀತಿಯಿಂದ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪರಿಹಾರ ಘೋಷಿಸಿ ಸಮೀಕ್ಷೆಗೆ ಬರಬೇಕಿತ್ತು ಎಂದಿದ್ದಾರೆ. ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದೊಂದು ಮುಟ್ಟಾಳರ ಸರ್ಕಾರ ಎಂದು ಕರೆದಿದ್ದಾರೆ.


