Top Newsರಾಜಕೀಯ

ಜಾತಿಗಣತಿ: ಶಂಖದಿಂದ ಬಂದರೆ ಮಾತ್ರ ತೀರ್ಥ – ಸಿದ್ದರಾಮಯ್ಯ

ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಈಗ ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ದೇವೇಗೌಡರದ್ದು ಇಬ್ಬಗೆಯ ನೀತಿ:
ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ರು. ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು, ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

Comments (0)

Your email address will not be published. Required fields are marked *

Back to top button