Thursday, September 11, 2025
18.9 C
Bengaluru
Google search engine
LIVE
ಮನೆ#Exclusive Newsಬೇಬಿ ಬಂಪ್​ ಲುಕ್​ನಲ್ಲಿ ಕಾಣಿಸಿಕೊಂಡ ಸಿಂಹಪ್ರಿಯಾ ಜೋಡಿ..!

ಬೇಬಿ ಬಂಪ್​ ಲುಕ್​ನಲ್ಲಿ ಕಾಣಿಸಿಕೊಂಡ ಸಿಂಹಪ್ರಿಯಾ ಜೋಡಿ..!

ಸ್ಯಾಂಡಲ್​ವುಡ್​ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಅತಿಥಿಯ ಆಗಮನದಲ್ಲಿದ್ದಾರೆ. ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದೀಪಾವಳಿ ಹಬ್ಬದ ದಿನವೇ ಅಭಿಮಾನಿಗಳ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದರು. ಇದೀಗ ಈ ಸ್ಟಾರ್​ ದಂಪತಿ ಬೇಬಿ ಬಂಪ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಚಂದನವನದ ಈ ಮುದ್ದಾದ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಅಭಿಮಾನಿಗಳು ನಟಿ ಗರ್ಭಿಣಿ ಎಂದು​ ಗೇಸ್​ ಮಾಡಿದ್ದರು. ನಟಿ ಹರಿಪ್ರಿಯಾ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಗರ್ಭಿಣಿ ಹಾಗೇ ಹಾಣಿಸಿಕೊಂಡಿದ್ದರು.

 

ಇದಾದ ಬಳಿಕ ಖುದ್ದು ಈ ಖುಷಿ ಸುದ್ದಿಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿತ್ತು. ಮೊದಲು ಮಾಲ್ಡೀವ್ಸ್​ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದ್ದರು.
ಅಲ್ಲದೇ ಫೋಟೋಗಳಲ್ಲಿ ಹರಿಪ್ರಿಯಾ ಬೇಬಿ ಬಂಪ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು.

 

 

ಇದೀಗ ಮತ್ತೆ ಮುದ್ದಾದ ಮತ್ತೊಂದು ಬೇಬಿ ಬಂಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಹೊಸ ವರ್ಷದ ಖುಷಿಯಲ್ಲಿರೋ ಸ್ಟಾರ್ ದಂಪತಿ ನೀಲಿ ಬಣ್ಣದ ಕಾಸ್ಟ್ಯೂಮ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ಫೋಟೋಸ್ ನೋಡಿದ ಅಭಿಮಾನಿಗಳು ಯಾವುದೇ ದೃಷ್ಟಿಯಾಗದಿರಲಿ, ಸೂಪರ್​ ಬೇಬಿ ಶೂಟ್​ ಅಂತ ಕಾಮೆಂಟ್ಸ್ ಹಾಕಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments