SIR ಅಕ್ರಮ ಆರೋಪ – ಚುನಾವಣಾ ಆಯೋಗದ ಕಚೇರಿ ಮೆಟ್ಟಿಲಲ್ಲೇ ಪ್ರತಿಭಟನೆ ಕುಳಿತ ಸಿಎಂ!
Allegations of irregularities against SIR – CM stages protest right on the steps of the Election Commission office!

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ತೀವ್ರ ಸಂಚಲನ ಮೂಡಿಸಿರುವ SIR ವಿಚಾರವಾಗಿ, ಆಡಳಿತರೂಢ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದ (ECI) ವಿರುದ್ಧ ನೇರ ಸಮರ ಸಾರಿದೆ. ಸುಮಾರು 1 ಕೋಟಿ ಮತದಾರರ ಹೆಸರುಗಳನ್ನು ಏಕಪಕ್ಷೀಯವಾಗಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮೆಟ್ಟಿಲುಗಳ ಮೇಲೆ ಧರಣಿ ನಡೆಸಿದ್ದಾರೆ.
ನಕಲಿ ‘ಫಾರ್ಮ್-7’ ಸಲ್ಲಿಸಿ ಮತದಾರರ ಹೆಸರು ಡಿಲೀಟ್ ಮಾಡಲು ಯತ್ನಿಸಿದವರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳು ಕಚೇರಿಯ ಮೆಟ್ಟಿಲುಗಳ ಮೇಲೆ ಕುಳಿತು ಧರಣಿ ಆರಂಭಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಐತಿಹಾಸಿಕ ಧರಣಿಯಲ್ಲಿ ರಾಜ್ಯ ಸರ್ಕಾರದ ಹಲವು ಸಚಿವರು ಮತ್ತು ಪ್ರಮುಖ ನಾಯಕರು ಭಾಗವಹಿಸಿ ಬೆಂಬಲ ಸೂಚಿಸಿದರು. ಸಚಿವರಾದ ಜಿ. ಪರಮೇಶ್ವರ್, ಎನ್. ಚಲುವರಾಯಸ್ವಾಮಿ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಯು.ಟಿ. ಖಾದರ್, ಮಧು ಬಂಗಾರಪ್ಪ, ಲಕ್ಷ್ಮಣ ಸವದಿ, ಶಿವಲಿಂಗೇಗೌಡ, ರಿಜ್ವಾನ್ ಅರ್ಷದ್, ಬೈರತಿ ಸುರೇಶ್ ಸೇರಿದಂತೆ ಹಲವು ಪ್ರಮುಖ ನಾಯಕರು ಧರಣಿಯಲ್ಲಿ ಭಾಗಿಯಾಗಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಸುಮಾರು 1 ಕೋಟಿಗೂ ಅಧಿಕ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಹಾಗೂ ತಕ್ಷಣವೇ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಿಯೋಗ ಮತ್ತೊಮ್ಮೆ ಚುನಾವಣಾ ಆಯೋಗದ ಮೆಟ್ಟಿಲೇರಿದೆ.




