ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣ ಸಂಬಂಧ ಎಸ್‌ಐಟಿ ಆರೋಪಿ ಚಿನ್ನಯ್ಯ ಬಂಧಿಸಿದ್ದು, ಚಿನ್ನಯ್ಯಗೆ ಆಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಇಂದು ಬೆಳಗ್ಗೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.. ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜತೆಯಲ್ಲಿ ಕರೆದುಕೊಂಡು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.
ದಾಳಿ ವೇಳೆ ಮಹೇಶ್ ಶೆಟ್ಟಿ ಮತ್ತು ಸಹೋದರ ಮೋಹನ್ ಶೆಟ್ಟಿ ಮನೆಗೂ ಮೇಲೆ ದಾಳಿ ನಡೆಸಲಾಗಿದೆ.
ಬುರುಡೆ ಗ್ಯಾಂಗೆ ಪ್ರತಿ ಹಂತದಲ್ಲೂ ತಿಮರೋಡಿ ಮನೆಯಲ್ಲೇ ಸೇರುತ್ತಿದ್ದು ಎಲ್ಲ ಬುರುಡೆ ಪ್ಲಾನ್ ಇಲ್ಲಿಂದಲೇ ಆರಂಭವಾಗಿರುವ ಬಗ್ಗೆ ಎಸ್‌ಐಟಿಗೆ ಮಾಹಿತಿ ದೊರೆತಂತೆ ರೈಡ್ ಮಾಡಲಾಗಿದೆ ಎನ್ನಲಾಗಿದೆ. ಇನ್ನು ತಿಮರೋಡಿ ಮನೆ ಬಳಿ ಮಾಧ್ಯಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ತಿಮರೋಡಿ ಮನೆ ಬಳಿ ಭಾರೀ ಹೈಡ್ರಾಮಾ ನಡೆದಿದೆ..