ಜಿಲ್ಲೆ

ವಿಜಯಪುರದ ಭೂತನಾಳ ಕೆರೆಯಲ್ಲಿ 6 ಶವಗಳು ಪತ್ತೆ!

Six bodies found in Vijayapura's Bhutanal Lake!

ವಿಜಯಪುರ : ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ 6 ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಶೋಭಾ ಜಾಲಗೇರಿ (45) ತಾಯಿ, ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ (5) ಸಾನಿಕಾ (7) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. 

ಆಗಸ್ಟ್ 24ರಂದು ನಾಪತ್ತೆಯಾಗಿದ್ದ ಒಂದೇ ಕುಟುಂಬದ ಆರು ಮಂದಿ ಇಂದು ಭೂತನಾಳ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗಂಡ ಮಲಕಾರಿ ಭೀಮರಾಯ ಜಾಲಗೇರಿ ಜೊತೆ ಗೃಹಿಣಿ ಶೋಭಾ ಜಗಳವಾಡಿದ್ದರು ಎನ್ನಲಾಗಿದೆ. ಜಗಳದ ಸಂದರ್ಭದಲ್ಲಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶೋಭಾ ಎಚ್ಚರಿಕೆ ನೀಡಿದ್ದರು.

ಮೃತರನ್ನು ವಿಜಯಪುರ ತಾಲೂಕಿನ ತೊರವಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಕೂಡಲೇ ದೌಡಾಯಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ರವಾನಿಸಿದ್ದಾರೆ.

Comments (0)

Your email address will not be published. Required fields are marked *

Back to top button