ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿದ ಅವರು, ಸತ್ಯವಿಲ್ಲದ ಭಕ್ತಿಯ ಸಾವಿರ ವರುಷ ಮಾಡಿದರೇನು? ನಿಷ್ಠೆಯಿಲ್ಲದ ಪೂಜೆಯನೇ ಸುಕಾಲ ಮಾಡಿದರೇನು? ಎಂಬ ವಚನಾಮೃತದಂತೆ ಹುರುಳಿಲ್ಲದ ಬಜೆಟ್ ಹದಿನಾರು ಮಂಡಿಸಿದರೇನು? ಗ್ಯಾರೆಂಟಿ ಇಲ್ಲದ ಕುರ್ಚಿಯಿಂದ ಪೊಳ್ಳು ಆಯವ್ಯಯ ಭಾಷಣ ಓದಿದರೇನು? ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ 16ನೇ ಬಜೆಟ್‌ನಿಂದ ಕನ್ನಡಿಗರಿಗೆ ಏನೂ ನಿರೀಕ್ಷೆಗಳಿಲ್ಲ. ಅಸಲಿಗೆ ಸಿದ್ದರಾಮಯ್ಯನವರು ಮಂಡಿಸಲಿರುವ ಈ ಸಾಲಿನ ಬಜೆಟ್ ಅನ್ನು ಅನುಷ್ಠಾನ ಮಾಡಲು ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೋ ಇಲ್ಲವೋ ಎನ್ನುವುದನ್ನ ಮೊದಲು ಕರ್ನಾಟಕದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.