#Exclusive NewsTop News

SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ

ಬೆಂಗಳೂರು, ಡಿಸೆಂಬರ್‌ 10: ಬಹುದಿನಗಳಿಂ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು (ಮಂಗಳವಾರ) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಎಸ್‌ ಎಂ ಕೃಷ್ಣರವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇನ್ನೂ ಬೆಳಗಾವಿಯ ಶೂನ್ಯ ರೆಸಾರ್ಟ್ನಲ್ಲಿ ಇಂದು ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button