Freedom TV

ಮುಡಾ ಖ್ಯಾತಿಯ ಸ್ನೇಹಮಯಿ ಕೃಷ್ಣ ನಾಪತ್ತೆ..!

ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ  ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.

ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ವಿರುದ್ಧ ದೂರು  ಮಾಡಿದ್ದ ಸ್ನೇಹಮಯಿ

ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.

ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗ್ಗತ್ತಿಸಿದ್ದರು.

ಈ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಸ್ನೇಹಮಯಿ ಕೃಷ್ಣ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್​ಐಆರ್ ದಾಖಲಾಗಿದೆ.

 

Comments (0)

Your email address will not be published. Required fields are marked *

Back to top button