ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆಗೆ ಅವರ ಮಾವ ವಿಠಲ ಗೌಡನೇ ಕಾರಣ ಎಂದು ಸಾಮಾಜಿಕ ಹೋರಾಟಹಾರ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ಧಾರೆ.
ಬೆಳ್ತಂಗಡಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಆ.9 ರಂದು ಸೌಜನ್ಯಳ ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಆಕೆಯ ಮಾವ ವಿಟ್ಟಲ್ ಗೌಡ. ಹೀಗಾಗಿ ವಿಟ್ಠಲ್ ಗೌಡನನ್ನು ಮಂಪರು ಪರೀಕ್ಷೆ ಮಾಡಬೇಕೆಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸೌಜನ್ಯಳ ಮೇಲೆ ಸೋದರಮಾವ ವಿಠಲ ಗೌಡಗೆ ಕೆಟ್ಟ ದೃಷ್ಟಿ ಇತ್ತು. ಆಕೆಯನ್ನು ಬಳಸಿಕೊಳ್ಳಲು ಬಹಳ ಸಮಯದಿಂದ ಹವಣಿಸುತ್ತಿದ್ದ. ಒಪ್ಪದೇ ಇದ್ದಂತ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಎಂದು ಆರೋಪಿಸಿದ್ದಾರೆ.
ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ ಗೌಡನ ಮೇಲೆ ಸಂಶಯವಿತ್ತು. ಸೌಜನ್ಯ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಸಂತೋಷ್ ರಾವ್ ಅವರನ್ನು ಈ ಕೃತ್ಯಕ್ಕೆ ಬಳಸಿಕೊಂಡಿರಬಹುದು. ಈ ಬಗ್ಗೆ ನಾನು ಬಹಳ ದಿನಗಳಿಂದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸಂಪೂರ್ಣ ಮರುತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು. ವಿಠಲ ಗೌಡನ ಮಂಪರು ಪರೀಕ್ಷೆ ಮಾಡಬೇಕು. ಮಂಪರು ಪರೀಕ್ಷೆಯಿಂದ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.