Thursday, August 21, 2025
25.7 C
Bengaluru
Google search engine
LIVE
ಮನೆ#Exclusive NewsTop Newsಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ

ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ನರೇಶ್ ಯಲ್ಲಪ್ಪ ಆಗಸರ (28) ಶನಿವಾರ ಸಂಜೆ ಪರಸನಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ.  ವೈವಾಹಿಕ ಜೀವನದಲ್ಲಿ ಏರುಪೇರು ಉಂಟಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಂದ ಮೃತದೇಹದ ಹುಡುಕಾಟ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೂ ಕೆರೆಯಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments