ಮೈಸೂರು: ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾದ್ರ ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಕೇರಳದ ವಯನಾಡಿಗೆ ಪ್ರಯಾಣ ಬೆಳೆಸಿದರು. ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ತಾಯಿ ಸೋನಿಯಾ ಜೊತೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು.
ಮೈಸೂರಿಗೆ ಬಂದು ವಯನಾಡಿಗೆ ಸೋನಿಯಾ, ಪ್ರಿಯಾಂಕಾ ಪ್ರಯಾಣ
0
11
RELATED ARTICLES