ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿಗೆ ಮತ್ತೊಂದು ಹಂತದಲ್ಲಿ ಗೆಲುವು ಸಿಕ್ಕಿದೆ. 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಗೆಲುವು ಸಾಧಿಸಿದ್ದಾರೆ ಅಂತ ಘೋಷಿಸಲಾಗಿತ್ತು. ಆದರೆ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಸೌಮ್ಯಾ ರೆಡ್ಡಿ ಸಿಕೆ ರಾಮಮೂರ್ತಿ ವಿರುದ್ಧ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿ.ಕೆ. ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.


