ದಕ್ಷಿಣ ಕೊರಿಯಾ : ಜೆಜು ಏರ್ ಫ್ಲೈಟ್ 7C2216, ಥಾಯ್ ರಾಜಧಾನಿ ಬ್ಯಾಂಕಾಕ್‌ನಿಂದ ವಿಮಾನದಲ್ಲಿ 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ದು, ದೇಶದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 9 ಗಂಟೆಯ ನಂತರ ಇಳಿಯುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ದಕ್ಷಿಣ ಕೊರಿಯಾದ ಸಾರಿಗೆ ಸಚಿವಾಲಯ ತಿಳಿಸಿದೆ.
ಇದುವರೆಗೆ 47 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕೊರಿಯಾದ ನಗರವಾದ ಮುವಾನ್‌ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಭಾನುವಾರ ಜೆಜು ಏರ್ ವಿಮಾನವು ಲ್ಯಾಂಡಿಂಗ್ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ಬ್ಯಾಂಕಾಕ್‌ನಿಂದ ಹಿಂತಿರುಗುತ್ತಿತ್ತು. ಬೋಯಿಂಗ್ 737-800 ವಿಮಾನದಲ್ಲಿದ್ದ ಪ್ರಯಾಣಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಳೆದ ವಾರ ಕಜಾಕಿಸ್ತಾನದ ಅಕ್ಟೌ ಬಳಿ ಸಂಭವಿಸಿದ ಅಜೆರ್‌ಬೈಜಾನ್ ಏರ್‌ಲೈನ್ ವಿಮಾನ ಅಪಘಾತದ ಬೆನ್ನಲ್ಲೇ ಈ ಸುದ್ದಿ ಕೇಳಿಬಂದಿದೆ. ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 175 ಪ್ರಯಾಣಿಕರು ಮತ್ತು 6 ಸಿಬ್ಬಂದಿ ವಿಮಾನದಲ್ಲಿದ್ದರು.
ರಕ್ಷಣಾ ಮತ್ತು ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸುತ್ತಿದೆ. ವಿಮಾನವು ಥೈಲ್ಯಾಂಡ್‌ನಿಂದ ಹಿಂತಿರುಗುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ಅಪಘಾತ ಸಂಭವಿಸಿದೆ.ಮುವಾನ್ ವಿಮಾನ ನಿಲ್ದಾಣ ನೀಡಿರುವ ಮಾಹಿತಿಯಲ್ಲಿ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಂಡಿದೆ.ಈ ಅವಘಡದಲ್ಲಿ ಗಾಯಗೊಂಡಿರುವ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.