Top Newsರಾಜ್ಯಸುದ್ದಿ

ಹುಣ್ಣಿಮೆಯಿಂದ ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್​ ಸೇವೆ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ಶೀಗೆ ಹುಣ್ಣಿಮೆ, ದೀಪಾವಳಿ ಅಮಾವಾಸ್ಯೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸವದತ್ತಿಗೆ ಬಸ್​ ಸೌಲಭ್ಯ ಕಲ್ಪಿಸಲಾಗಿತ್ತು. ಈ ವಿಶೇಷ ನೇರ ಬಸ್​​ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಬಸ್​ಗ​​ಳಿಂದ ಸಾವಿರಾರು ಭಕ್ತರಿಗೆ ಬಹಳಷ್ಟು ಅನುಕೂಲವಾಗಿದೆ. ಬರುವ ಹುಣ್ಣಿಮೆಯ ದಿನ, ಮಂಗಳವಾರ ಹಾಗೂ ಶುಕ್ರವಾರದಂದು ಕೂಡ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್​​ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದಿತ್ತು ಎಂದು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button