ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ – ಕಸ್ತೂರಿ ರಂಗನ್ ವರದಿ, ಬರ ಪರಿಸ್ಥಿತಿ ಬಗ್ಗೆ ಚರ್ಚೆ!
Special session of the Legislature begins today – discussion on the Kasturirangan Report and drought situation!

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ. ಕಸ್ತೂರಿ ರಂಗನ್ ವರದಿ, ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯಲಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಕ್ಸಮರ ನಡೆಯುವ ಸಾಧ್ಯತೆ ಇದೆ.
ಕಳೆದ ತಿಂಗಳು ನಡೆದಿದ್ದ ಮಳೆಗಾಲದ ಅಧಿವೇಶನದಲ್ಲಿ ಈ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಸರ್ಕಾರವು ಈ ವಿಶೇಷ ಅಧಿವೇಶನವನ್ನು ಕರೆದಿದೆ.
ಬರ ಪರಿಸ್ಥಿತಿ ಮತ್ತು ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆಯಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನರ ಮೇಲಾಗುವ ಪರಿಣಾಮಗಳ ಬಗ್ಗೆ ಗಂಭೀರ ಚರ್ಚೆ ನಡೆಸಲು ಸರ್ಕಾರ ಮೂರು ದಿನಗಳ ವಿಶೇಷ ಅಧಿವೇಶನ ನಡೆಸುತ್ತಿದೆ. ಬೆಳಗ್ಗೆ 11 ಗಂಟೆಗೆ ಸದನ ಆರಂಭವಾಗಲಿದ್ದು, ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಬೆಳೆಹಾನಿ, ಕುಡಿಯುವ ನೀರು ಮತ್ತು ವಿದ್ಯುತ್ ಅಭಾವದ ಕುರಿತು ಚರ್ಚೆ ನಡೆಯಲಿದೆ. ಜಾನುವಾರುಗಳಿಗೆ ನೀರು ಮತ್ತು ಮೇವಿನ ಕೊರತೆ, ಬೆಳೆ ನಷ್ಟ ಪರಿಹಾರದ ಬಗ್ಗೆಯೂ ಗಂಭೀರ ಚರ್ಚೆ ನಡೆಯುವ ಸಾಧ್ಯತೆಯಿದೆ. ರೈತರ ಸಾಲಮನ್ನಾಗೆ ಪ್ರತಿಪಕ್ಷಗಳು ಪಟ್ಟು ಹಿಡಿಯುವ ಸಾಧ್ಯತೆಯೂ ಇದೆ.
ಉಡುಪಿ, ಚಿಕ್ಕಮಗಳೂರು ಬಳಿಕ ಹಾಸನದ ಸಕಲೇಶಪುರದಲ್ಲಿ ಕಸ್ತೂರಿರಂಗನ್ ವರದಿ ಜಾರಿಯಿಂದ ಬಾಧಿತರಾಗುವ ಗ್ರಾಮಸ್ಥರೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸಂವಾದ ನಡೆಸಿದ್ದಾರೆ. ಶೀಘ್ರದಲ್ಲೇ ಸಮಸ್ಯೆ ಪರಿಹರಿಸುವುದಾಗಿ ಅವರು ಹೇಳಿದ್ದಾರೆ.




