MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್ ತಂಡವು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಈ ಬಾರಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವನ್ನು ಸೋಲಿಸಿ ವಾಷಿಂಗ್ಟನ್ ಫ್ರೀಡಮ್ ಟ್ರೋಫಿ ಎತ್ತಿ ಹಿಡಿದಿದೆ. ಅಮೆರಿಕದಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಡಲ್ಲಾಸ್ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ನಾಯಕ ಕೋರಿ ಅ್ಯಂಡರ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ವಾಷಿಂಗ್ಟನ್ ಫ್ರೀಡಮ್ ತಂಡಕ್ಕೆ ಸ್ಟೀವ್ ಸ್ಮಿತ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೋರ್ವ ಓಪನರ್ ಟ್ರಾವಿಸ್ ಹೆಡ್ (9) ಬೇಗನೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಆಂಡ್ರೀಸ್ ಗೌಸ್ (21) ಔಟಾದರು.
52 ಎಸೆತಗಳನ್ನು ಎದುರಿಸಿದ ಸ್ಟೀವ್ ಸ್ಮಿತ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 88 ರನ್ ಬಾರಿಸಿದರು. ಇನ್ನು 22 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್ 40 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ವಾಷಿಂಗ್ಟನ್ ಫ್ರೀಡಮ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com