ದೇಶ/ವಿದೇಶ

ದೇಶಾದ್ಯಂತ ಶ್ರೀರಾಮ ನವಮಿ ಉತ್ಸವ; ಅಯೋಧ್ಯೆಯಲ್ಲಿ ಕಳೆಗಟ್ಟಿದ ಸಂಭ್ರಮ

ಅಯೋಧ್ಯೆ: ರಾಮನವಮಿ ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ.

ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಎಲ್ಲಾ ವಿಶೇಷ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ. ದೇವಸ್ಥಾನ, ಸರಯೂ ನದಿ ಸೇರಿ ಎಲ್ಲ ಕಡೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ.

ಮಧ್ಯಾಹ್ನದ ವೇಳೆಗೆ ಬಾಲರಾಮನ ವಿಗ್ರಹದ ಹಣೆ ಮೇಲೆ ಸೂರ್ಯ ರಶ್ಮಿ ಬೀಳಲಿದ್ದು, ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಸಂಜೆ ಸರಯೂ ನದಿ ತೀರದ ರಾಮಕೀ ಪೌಡಯಲ್ಲಿ ಎರಡು ಲಕ್ಷ ಹಣತೆಗಳು ಬೆಳಗಲಿದೆ.

Comments (0)

Your email address will not be published. Required fields are marked *

Back to top button