ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮೇಲೂ ಶ್ರೀರಾಮುಲು ಗರಂ ಆಗಿದ್ದಾರೆ.
ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲುರನ್ನು ಕರೆದುಕೊಳ್ಳಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಳ್ಳಾರಿ ಭಾಗದಲ್ಲಿ ಜನರು ಮಾತನಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶ್ರೀರಾಮುಲು ಅವರ ರಾಜೀನಾಮೆ ಹೇಳಿಕೆಯ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಕೂಡ ಖಾರವಾದ ತಿರುಗೇಟು ನೀಡಿದ್ದಾರೆ.ನೇರವಾಗಿ ಶ್ರೀರಾಮುಲು ಅವರು ಪಕ್ಷ ಬಿಟ್ಟು ಹೋಗೋದಾದ್ರೆ ಹೋಗಲಿ. ಆದರೆ ಶ್ರೀರಾಮುಲು ನನ್ನ ಮೇಲೆ ಆರೋಪ ಮಾಡೋದ್ಯಾಕೆ ಎಂದು ಪ್ರಶ್ನಿಸಿದ್ದಾರೆ.