Top Newsರಾಜ್ಯ

SSLC ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ..ಹಾಗಾದ್ರೆ ಕೊನೆ ಸ್ಥಾನ ಯಾವುದು…?

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

  • 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ತೆರ್ಗಡೆ ಹೊಂದಿದ್ದಾರೆ..
  • 108 ಖಾಸಗಿ ಶಾಲೆಗಳಲ್ಲಿ ಮತ್ತು 6 ಸರ್ಕಾರಿ ಶಾಲೆಗಳಲ್ಲಿಶೂನ್ಯ ಫಲಿತಾಂಶ.
  • ಶೇ.57ರಷ್ಟು ಕನ್ನಡ ಮಾಧ್ಯಮ ಹಾಗೂ ಶೇ.78ರಷ್ಟು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದಾರೆ..
  • ಈ ವರ್ಷ ಕಳೆದ ಬಾರಿಗಿಂತ ಶೇ. 8ರಷ್ಟು ಫಲಿತಾಂಶ ದಲ್ಲಿ ಏರಿಕೆಯಾಗಿದೆ..

Comments (0)

Your email address will not be published. Required fields are marked *

Back to top button