Top Newsರಾಜ್ಯಸುದ್ದಿ

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

ಮೈಸೂರು: ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾಗರಾಜ್, ವಸಂತ ಎಂಬುವರ ಪುತ್ರಿ ದೀಪಿಕಾ (15) ಸಾವನ್ನಪ್ಪಿದ ಯುವತಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Comments (0)

Your email address will not be published. Required fields are marked *

Back to top button