Top Newsಸುದ್ದಿ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : 10 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

ಲಖನೌ: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್​​ರಾಜ್​ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣ ಎರಡನೇ ಅಮೃತ ಸ್ನಾನ ಕೈಗೊಳ್ಳಲು ಭಕ್ತರು ಆಗಮಿಸುತ್ತಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರು ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಬಹಳ ಜಾಗರೂಕರಾಗಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅದೇ ಸಮಯದಲ್ಲಿ, ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಅಮಿತ್ ಶಾ ಅವರು ಮುಖ್ಯಮಂತ್ರಿಯಿಂದ ದೂರವಾಣಿ ಮೂಲಕ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಕ್ತರು ಸಂಗಮದ ಮಧ್ಯ ಭಾಗಕ್ಕೆ ತೆರಳಬೇಡಿ, ಹತ್ತಿರದ ಘಾಟ್​ನಲ್ಲಿ ಸ್ನಾನಮಾಡಿ ಎಂದು ಮನವಿ ಮಾಡಿದ್ದಾರೆ. ಆಡಳಿತ ನೀಡುವ ಸೂಚನೆಗಳನ್ನು ಪಾಲಿಸಿ ಆಡಳಿತಕ್ಕೆ ಸಹಕರಿಸುವಂತೆ ಮನವಿ ಮಾಡಿದರು. ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.

Comments (0)

Your email address will not be published. Required fields are marked *

Back to top button