ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ ಭಾಷಣ ಕೇಂದ್ರ ಸರ್ಕಾರದ ಧೋರಣೆಗಳನ್ನು ಒಳಗೊಂಡಿರಲಿದೆ ಎನ್ನಲಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 6ರಂದು ಸರ್ಕಾರ ಉತ್ತರ ನೀಡಲಿದೆ. ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ.


