Tuesday, January 27, 2026
24 C
Bengaluru
Google search engine
LIVE
ಮನೆUncategorizedಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ; ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ- ಪರಮೇಶ್ವರ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ; ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ- ಪರಮೇಶ್ವರ್

ಬೆಂಗಳೂರು: ರಾಜ್ಯದ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡಿದ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್​​ ಅವರು ಪ್ರತಿಕ್ರಿಯಿಸಿದ್ದು, ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಜೈಲಿನ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ..

ಜೈಲಿನಲ್ಲಿ ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್ ಅವರ ಜತೆ ನಿನ್ನೆ ಮಾತನಾಡಿದ್ದೇನೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು. ಇದು ನಾನ್‌ಸೆನ್ಸ್, ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಹಿಂದೆನೂ ಹಳೇ ವಿಡಿಯೋ ಬಂದಿತ್ತು. ಏನೇ ಇರಲಿ ಇದು ಯಾವುದೂ ನಡೆಯಬಾರದು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments