Thursday, January 29, 2026
24.2 C
Bengaluru
Google search engine
LIVE
ಮನೆಜಿಲ್ಲೆನಾಳೆ ರಾಜ್ಯ ಮಟ್ಟದ ಆಟೋ ಚಾಲಕ/ಮಾಲಕರ ಸಮಾವೇಶ

ನಾಳೆ ರಾಜ್ಯ ಮಟ್ಟದ ಆಟೋ ಚಾಲಕ/ಮಾಲಕರ ಸಮಾವೇಶ

ಗದಗ: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಟೋ ಚಾಲಕರ/ಮಾಲಕರ ಸಮಾವೇಶ ಹಮ್ಮಿಕೊಂಡಿದ್ದು, ಇಂದು ಮುಂಜಾನೆ 10ಗಂಟೆಗೆ ಮೇರವಣಿಗೆ ಆರಂಭವಾಗಲಿದೆ. ಮೇರವಣಿಗೆಯಲ್ಲಿ ಸುಮಾರು 5ಸಾವಿರಕ್ಕೂ ಹೆಚ್ಚು ಆಟೋಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ವ್ಹಿ ಆರ್ ಗೋವಿಂದಗೌಡ್ರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾವೇಶಕ್ಕೆ ರಾಜ್ಯದ ವಿವಿಧ ಆಟೋ ಸಂಘಟನೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲ ಹಂತದ ಪದಾದಿಕಾರಿಗಳು ಭಾಗವಹಿಸಲಿದ್ದಾರೆ. “ಆಟೋ ಚಾಲಕರ ನಡಿಗೆ, ಗದಗ ಸಮಾವೇಶದ ಕಡೆಗೆ” ಎನ್ನುವ ಘೋಷ ವಾಕ್ಯದೊಂದಿಗೆ ಮೇರವಣಿಗೆ ನಡೆಯಲಿದೆ. ನಂತರ ಸಮಾವೇಶ ನಡೆಯಲಿದ್ದು, ಆಟೋ ಚಾಲಕರ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಗಜೇಂದ್ರಗಡ, ರೋಣ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ, ನರಗುಂದ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾವೇರಿ, ದಾವಣಗೇರಿ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಆಟೋ ಚಾಲಕರು ಸಾವಿರಾರು ಸಂಖ್ಯೆಯಲ್ಲಿ ಸೇರಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜಗದ್ಗುರು ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಹಾಗೂ ಪ. ಪೂ. ಡಾ. ಕಲ್ಲಯ್ಯಜ್ಜನವರು ವಹಿಸಿಕೊಳ್ಳಲಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಕೆ ಪಾಟೀಲ್ ವಹಿಸಿಕೊಳ್ಳಲಿದ್ದಾರೆ. ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಸ್ ಎನ್ ಬಳ್ಳಾರಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಆಟೋ ಚಾಲಕ/ಮಾಲಕರ ಬೇಡಿಕೆಗಳು..

*ಕಾರ್ಮಿಕರೆಂದು ಪರಗಣಿಸುವುದು..
*ಕಲ್ಯಾಣ ಮಂಡಳಿ ಸ್ಥಾಪನೆ ಮಾಡುವುದು..
*ವಸತಿ ಹಾಗೂ ಆಟೋ ಕಾಲೊನಿ ನಿರ್ಮಿಸುವುದು..
*ವಿಶೇಷ ವಿಧ್ಯಾರ್ಥಿ ವೇತನ ನೀಡುವುದು..
*ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಅವಕಾಶ ಮಾಡಿಕೊಡುವುದು..
*ವೈದ್ಯಕೀಯ ಸೌಲಭ್ಯ ಒದಗಿಸಬೇಕು..
*ಸಮುದಾಯ ಭವನ ನಿರ್ಮಾಣ ಮಾಡಬೇಕು..
*ಆಟೋ ರಿಕ್ಷಾಗಳಿಗೆ ತೆರಿಗೆ ವಿನಾಯ್ತಿ ನೀಡಬೇಕು..
*ರಾಜ್ಯದ ಎಲ್ಲ ಬಸ್ ನಿಲ್ದಾಣಗಳಲ್ಲಿ ಆಟೋ ಸ್ಟ್ಯಾಂಡ್ ನಿರ್ಮಿಸಬೇಕು..

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments