ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಏಪ್ರಿಲ್ 4ರಿಂದ 6ರವರೆಗೆ, ಜೂನಿಯರ್ ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ, ಡಾ. ಜಿ. ಪರಮೇಶ್ವರ್ ಕಪ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ನಡೆಯಲಿದೆ.
ರಾಜೀವ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಪಟ್ಟಣ ಪಂಚಾಯಿತಿ ಸದಸ್ಯ ನಂದೀಶ್ ನರಸಿಂಹಪ್ಪ ಮಾತನಾಡಿ, ಕ್ರಿಕೆಟ್ ಪಂದ್ಯಾವಳಿ ಬಗ್ಗೆ ಮಾಹಿತಿ ನೀಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ, ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದ್ದು, ರಾಜ್ಯದ 24 ಪ್ರತಿಷ್ಠಿತ ತಂಡಗಳು ಭಾಗವಹಿಸುತ್ತಿವೆ. ಪ್ರತಿ ಪಂದ್ಯಕ್ಕೂ ಮ್ಯಾನ್ ಆಫ್ ದ ಸೀರಿಸ್ ಹಾಗೂ ಮ್ಯಾನ್ ಆಫ್ ದ ಮ್ಯಾಚ್, ಜೊತೆಗೆ ತಲಾ ಒಂದು ಟಿವಿಎಸ್ ಬೈಕ್ ಬಹುಮಾನವಾಗಿ ನೀಡಲಾಗುತ್ತಿದೆ. ಹಾಸನ, ತುಮಕೂರು, ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಯ ರಾಜ್ಯ ಮಟ್ಟದ ತಂಡಗಳು ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ನಾವು ಸರಳವಾಗಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯ ಆಯೋಜಿಸಲು ಮುಂದಾದಾಗ, ಡಾ. ಜಿ. ಪರಮೇಶ್ವರ್ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯ ಆಯೋಜಿಸಲು ಹೇಳಿದರು. ಹೀಗಾಗಿ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿರುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ತಿಳಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ್, ಯುವ ಕಾಂಗ್ರೆಸ್ ಅಧ್ಯಕ್ಷ ಬೈರೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ರು.