ಬೆಂಗಳೂರು : ವಿಧಾನಪರಿಷತ್‌ನಲ್ಲಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ಹಿನ್ನೆಲೆಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.
ಗುರುವಾರ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತಾಗಿ ಅವಹೇಳನಕಾರಿ ಪದ ಬಳಕೆ ಆರೋಪ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದು ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದಲ್ಲದೇ, ಸಿ.ಟಿ ರವಿ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಹಲ್ಲೆಗೆ ಯತ್ನ ನಡೆಸಿದ್ದರು.
ನಂತರದಲ್ಲಿ ಸಿ.ಟಿ ರವಿ ವಿರುದ್ಧ ಎಫ್‌ಐ ಆರ್ ದಾಖಲಾದ ಹಿನ್ನೆಲೆಯಲ್ಲಿ ಅವರ ಬಂಧನ ಕೂಡ ಆಗತ್ತು. ಇದೀಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿ.ಟಿ ರವಿ ಅವರನ್ನು ಬಿಡುಗಡೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಭಾಪತಿ ಹೊರಟ್ಟಿಗೆ ಪತ್ರ ಬರೆದಿರುವುದು ರಾಜ್ಯದ ಗಮನ ಸೆಳೆದಿದೆ.
ಸಿ.ಟಿ ರವಿ ಬಂಧನ ಪ್ರಕರಣವೂ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ನಡುವೆ ಸಿ.ಟಿ ರವಿ ಹಾಗೂ ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಅಲ್ಲದೆ ಸಭಾಪತಿಗೂ ಅಧಿಕೃತವಾಗಿ ದೂರು ನೀಡಲಾಗಿದೆ.
ಪತ್ರದಲ್ಲಿ ಏನಿದೆ?