ಕ್ರೈಂ ಸ್ಟೋರಿ

ಕಲ್ಲು ಕ್ವಾರಿ ದುರಂತ – ಕ್ರಷರ್ ಮಾಲೀಕ ಸೇರಿ ಮೂವರು ಅರೆಸ್ಟ್!

Stone quarry tragedy - Three arrested, including crusher owner!

ಬೆಂಗಳೂರು: ತಾವರಕೆರೆ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಕ್ರಷರ್ ಮಾಲೀಕ ಹಾಗೂ ಮ್ಯಾನೇಜರ್ ಸೇರಿ ಮೂವರನ್ನು ಬಂಧಿಸಿದ್ದಾರೆ.

ತಾವರಕೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ರಷರ್ ಹಾಗೂ ಕ್ವಾರಿ ಇನ್ ಚಾರ್ಜ್ ಲೋಕೇಶ್ ಸೇರಿ ಮೂವರನ್ನು ಅರೆಸ್ಟ್‌ ಮಾಡಿದ್ದಾರೆ.

ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೂ, ಈ ದುರಂತದ ಹಿಂದಿರುವ ಪ್ರಮುಖ ಆರೋಪಿಗಳು ಇನ್ನೂ ನಾಪತ್ತೆಯಾಗಿದ್ದಾರೆ. ಕಾವೇರಿ ಕ್ರಷರ್‌ನ ಅಸಲಿ ಮಾಲೀಕ ಉದಯ್ ಶಂಕರ್, ಬಸವೇಶ್ವರ್ ಕ್ರಷರ್‌ನ ಮಾಲೀಕ ಡಿ. ಆನಂದಸ್ವಾಮಿ, ಕ್ವಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿಟಾಚಿ ಚಾಲಕ ತಿರುಪತಿ ತಲೆಮರೆಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿದ್ದ ಪರಿಣಾಮ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕರೊಬ್ಬರು ನೀಡಿದ ದೂರಿನ ಮೇರೆಗೆ ತಾವರಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ಮೇಲೆ BNS ಆ್ಯಕ್ಟ್ 105, 125(A), 324(5), ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Comments (0)

Your email address will not be published. Required fields are marked *

Back to top button