Tuesday, January 27, 2026
26.7 C
Bengaluru
Google search engine
LIVE
ಮನೆ#Exclusive NewsTop Newsಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಸಿಬಿಐ ತನಿಖೆಗೆ ನೀಡಿ: ವಿಜಯೇಂದ್ರ ಆಗ್ರಹ

ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಸಿಬಿಐ ತನಿಖೆಗೆ ನೀಡಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ ಅವರು ಬಯಲಿಗೆ ಎಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಇದರ ವಿರುದ್ಧ ಸದನದ ಒಳಗಡೆ ಹಾಗೂ ಸದನದ ಹೊರಗಡೆ ಹೋರಾಟ ಮಾಡುತ್ತ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಯನ್ನು ತುದಿಗಾಲಲ್ಲಿ ನಿಲ್ಲಿಸಿದ್ದೆವು ಎಂದರು.

ಮುಡಾ ಹಗರಣವು ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯವು 300 ಕೋಟಿಗೂ ಹೆಚ್ಚು ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟುಗೋಲು ಹಾಕಿಕೊಂಡಿದೆ. ಮುಡಾ ಹಗಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುಟುಂಬಕ್ಕೆ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದರು.

ಮುಡಾ ಹಗರಣವು ನಿನ್ನೆ ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯವು (ಇಡಿ) 300 ಕೋಟಿ ರೂ.ಗೂ ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹಗರಣದಿಂದ ಮುಡಾಕ್ಕೆ ಕೋಟಿಗಟ್ಟಲೆ ನಷ್ಟವಾಗಿದೆ.

ಬಡಜನರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಸ್ಪಷ್ಟವಾಗಿದೆ. ಇದರಿಂದ ಸರ್ಕಾರ ಮತ್ತು ಮುಡಾಕ್ಕೆ ಸಾವಿರಾರು ಕೋಟಿ ರೂ. ನಷ್ಟವಾದುದು ಮತ್ತೊಮ್ಮೆ ಋಜೂವಾತಾಗಿದೆ ಎಂದು ತಿಳಿಸಿದರು.

ನಮಗೆ ಸಿದ್ದರಾಮಯ್ಯನವರ ಬಗ್ಗೆ ದ್ವೇಷ ಇಲ್ಲ. ಆದರೆ, ಅಪರಾಧ ಆದ ಸಂದರ್ಭದಲ್ಲಿ, ತಪ್ಪಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಮುಖ್ಯಮಂತ್ರಿಗಳು ಸ್ವಯಂಪ್ರೇರಿತರಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಿತ್ತು. ಹಗರಣವನ್ನು ದೀರ್ಘ ಕಾಲ ಎಳೆದುಕೊಂಡು ಬಂದಿದ್ದಾರೆ. ಕ್ಷೇತ್ರಕ್ಕೆ 10 ಕೋಟಿ ರೂ. ಕೊಡುವ ಮೂಲಕ ಸಿಎಂ ಮತ್ತು ಪ್ರಿಯಾಂಕ್ ಖರ್ಗೆಯವರು ನಮಗೇನು ಉಪಕಾರ ಮಾಡುತ್ತಿದ್ದಾರಾ? ಅನೇಕ ಶಾಸಕರು ಅನುದಾನವಿಲ್ಲದೆ ಹತಾಶರಾಗಿದ್ದಾರೆ. ಸರ್ಕಾರ ಆಡಳಿತ ವಹಿಸಿಕೊಂಡು 2 ವರ್ಷವಾಗಿದೆ. ನಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿಗಾಗಿ ಹತ್ತಿಪ್ಪತ್ತು ಕೋಟಿ ರೂ. ಹಣ ಕೊಡಲಿಲ್ಲವೆಂದಾದರೆ, ಇವರ ಯೋಗ್ಯತೆಗೆ ಯಾವ ರೀತಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments