Tuesday, December 16, 2025
16.7 C
Bengaluru
Google search engine
LIVE
ಮನೆ#Exclusive NewsTop Newsಸರ್ವೇ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ

ಸರ್ವೇ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ

ಹಾಸನ: ರಾಜ್ಯದಲ್ಲಿ ಆರ್ಥಿಕ ಶೈಕ್ಷಣಿಕ ಜಾತಿ ಗಣತಿ ಮುಂದುವರೆದಿದ್ದು, ಹಾಸನದಲ್ಲಿ ಸರ್ವೇ ಕಾರ್ಯಕ್ಕಾಗಿ ಬಂದಿದ್ದ ಶಿಕ್ಷಕಿ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ..

ಹಾಸನ ಜಿಲ್ಲೆಯ ಬೇಲೂರಿನ ನೆಹರುನಗರದಲ್ಲಿ ಈ ಘಟನೆ ನಡೆದಿದ್ದು, ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿವೆ. ಬೇಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಚಿಕ್ಕಮ್ಮನವರ ಮೇಲೆ ನಾಯಿಗಳು ದಾಳಿ ಮಾಡಿದ್ದು, ಮುಖ, ಕೈ ಕಾಲಿಗೆ ಗಂಭೀರ ಗಾಯಗಳಾಗಿವೆ..

ನಾಯಿಗಳಿಂದ ಶಿಕ್ಷಕಿ ರಕ್ಷಿಸಲು ಮುಂದಾಗಿದ್ದ ಅವರ ಪತಿ ಶಿವಕುಮಾರ್​ ಸೇರಿದಂತೆ ಇನ್ನು 7 ಜನರ ಮೇಲೆ ನಾಯಿಗಳು ದಾಳಿ ಮಾಡಿವೆ. ಸದ್ಯ ತಾಲೂಕು ಆಸ್ಪತ್ರೆಯಲ್ಲಿ ಶಿಕ್ಷಕಿ ಸೇರಿದಂತೆ ಎಲ್ಲಾ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬೇಲೂರು ಶಾಸಕ ಹೆಚ್.ಕೆ.ಸುರೇಶ್​​, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments